ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಕ್ಕೆ ಆಕ್ರೋಶ: ಧಾರವಾಡದಲ್ಲಿ ಇಸ್ಕಾನ್ ಆಡಳಿತ ಮಂಡಳಿಯಿಂದ ಪ್ರತಿಭಟನೆ
ಧಾರವಾಡ: ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ, ಧಾರವಾಡದಲ್ಲಿ ಇಸ್ಕಾನ್ ಆಡಳಿತ ಮಂಡಳಿಯ ಸದಸ್ಯರು ಬಿದಿಗೆ ಇಳಿದು ಪ್ರತಿಭಟನೆ ಮೆರವಣಿಗೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕಲಾಭವನ ಬಳಿಯ ಡಾ. ಬಿ ಆರ್ ಅಂಬೇಡ್ಕರ್ ಮೂರ್ತಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ಸಾಗಿ ಬಂದಿದ್ದು, ಪ್ರತಿಭಟನೆ ಮೆರವಣಿಗೆ ಉದ್ದಕ್ಕೂ ಭಜನೆ ಮಾಡುವ ಮೂಲಕ ತಮ್ಮದೇ ಆದ ರೀತಿಯಲ್ಲಿ ಆಕ್ರೋಶ ಹೊರ ಹಾಕಿದರು.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೆಲೆ ದೌರ್ಜನ್ಯ ಮಾಡಲಾಗುತ್ತಿದೆ. ಕಳೆದ ಎರಡು ವಾರಗಳ ಹಿಂದೆ ಬಾಂಗ್ಲಾ ದೇಶದಲ್ಲಿರುವ ಹಿಂದೂ ಹೆಣ್ಣು ಮಕ್ಕಳ ಹಾಗೂ ಪುರುಷರ ಮೇಲೆ ಹಲ್ಲೆ ಮಾಡಲಾಗಿದೆ. ಜೊತೆಗೆ ಅಲ್ಲಿರುವ ದೇವಸ್ಥಾನಗಳ ಮೇಲೆಯು ದುಷ್ಕರ್ಮಿಗಳು ತಮ್ಮ ಅಟಹಾಸ ತೋರಿದ್ದಾರೆ. ಹಾಗಾಗಿ ಅಲ್ಲಿರುವ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು. ಬಾಂಗ್ಲಾದೇಶ ಸರ್ಕಾರದ ಜೊತೆಗೆ ಮಾತುಕತೆ ನಡೆಸಿ, ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಒತ್ತಾಯ ಮಾಡಬೇಕು ಹಾಗೂ ಬಾಂಗ್ಲಾದಲ್ಲಿರುವ ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಅಗ್ರಹಿಸಿದರು.