Uncategorized

ಜನಮನ ಸೂರೆಗೊಂಡ‌ ಕಲಾವಾಹಿನಿ; ಚನ್ನಮ್ಮನ ಸಾಧನೆಯ ಮೆಲುಕು

ಬೆಳಗಾವಿ: ಕಿತ್ತೂರು ವಿಜಯೋತ್ಸವದ ಸವಿನೆನಪಿಗಾಗಿ ಜಿಲ್ಲೆಯಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಶನಿವಾಸಂಭ್ರಮದಿಂದ ಬರಮಾಡಿಕೊಂಡು ಧ್ವಜಾರೋಹಣ ನೆರವೇರಿಸುವ ಮೂಲಕ ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.

ಪ್ರತಿವರ್ಷ ನಡೆಯುವ ಉತ್ಸವದ ಸಂಪ್ರದಾಯದಂತೆ ಚನ್ನಮ್ಮನ ಸಮಾಧಿ ಸ್ಥಳ ಬೈಲಹೊಂಗಲದಿಂದ ಹೊರಟು ಜಿಲ್ಲೆಯಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಸ್ವಾಗತಿಸಲಾಯಿತು.

ಸಂಸದರಾದ ಮಂಗಳಾ ಅಂಗಡಿ ಅವರು ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಉತ್ಸವದ ಧ್ವಜಾರೋಹಣ ನೆರವೇರಿಸಿ ಜ್ಯೋತಿಯನ್ನು ಬರಮಾಡಿಕೊಂಡರು.

ಚನ್ನಮ್ನ ಕಿತ್ತೂರಿನ ರಾಜಗುರು ಸಂಸ್ಥಾನ ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published.

Back to top button