Uncategorized

66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಗಮನ ಸೆಳೆದ ಸಾಮೂಹಿಕ ಲಕ್ಷ ಕಂಠ ಗೀತಗಾಯನ!!

ಬಾಗಲಕೋಟೆ: 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬಾಗಲಕೋಟೆಯ ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ಗಮನ ಸೆಳೆಯಿತು.

ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಯೋಗದಲ್ಲಿ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಭಾಷೆ ಸಂಸ್ಕೃತಿ ಸಾಹಿತ್ಯ,ಗೀತಗಾಯನ ಪ್ರೋತ್ಸಾಹ ಕಾರ್ಯಕ್ರಮಗಳು ಬಾಗಲಕೋಟೆ ಜಿಲ್ಲಾಡಳಿತ ಹಮ್ಮಿಕೊಂಡಿದೆ.

ಶುಕ್ರವಾರ ಜಿಲ್ಲಾ ಆಡಳಿತ ಭವನದ ಮುಂದೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲಕ್ಷ ಕಂಠಗಳ ಗೀತ ಗಾಯನ ಸಂಭ್ರಮದಿಂದ ನಡೆದಿದೆ.ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಗೀತ ಗಾಯನಕ್ಕೆ ದನಿಗೂಡಿಸಿದ್ದು ವಿಶೇಷವಾಗಿತ್ತು.

ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ, ಸಿಇಓ ಟಿ.ಭೂಬಾಲನ್, ಎಸಿ ಗಂಗಪ್ಪ, ಅಧಿಕಾರಿಗಳಾದ ಶ್ರೀಶೈಲ ಕಂಕಣವಾಡಿ, ಮಹೇಶ ಪೋತದಾರ, ಶಂಕರಗೂಗಿ, ಹೇಮಾವತಿ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ನಾಡಗೀತೆಯ ಸಾಮೂಹಿಕ ಗೀತ ಗಾಯನ ನಡೆಯಿತು

Related Articles

Leave a Reply

Your email address will not be published.

Back to top button