Uncategorized

ದಲಿತ ಮಹಿಳೆ ಹತ್ಯೆಗೆ ಖಂಡನೆ: ಹುಬ್ಬಳ್ಳಿಯಲ್ಲಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ಪ್ರತಿಭಟನೆ

ಧಾರವಾಡ: ಕಳೆದ ಅಕ್ಟೋಬರ್ 4 ರಂದು ಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಚೌಡೇಶ್ವರಹಾಳ ಗ್ರಾಮದ ದಲಿತ‌ ಮಹಿಳೆಯ ಹತ್ಯೆ ಖಂಡಿಸಿ, ಹುಬ್ಬಳ್ಳಿಯಲ್ಲಿ ಕರ್ನಾಟಕ ದಲಿತ ಸಮಿತಿ‌ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ದಲಿತ ವಿಮೋಚನಾ ಸಮಿತಿ ನೇತೃತ್ವದಲ್ಲಿ ನಗರದ ತಹಶಿಲ್ದಾರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು, ಕಾರ್ಯಕರ್ತರು ದಲಿತ ಮಹಿಳೆಯ ಹತ್ಯೆ ಮಾಡಿದವರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ಚೌಡೇಶ್ವರಿಹಾಳ ಗ್ರಾಮದ ಗಂಗಪ್ಪ ಅಳ್ಳಳ್ಳಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಆ ಮಹಿಳೆ ನಿರಾಕರಿಸಿದ್ದು, ಇದರಿಂದ ಕೋಪಗೊಂಡ ವಿಕೃತಿ ಗಂಗಪ್ಪ ತನ್ನ ಬೈಕ್​​ ನಲ್ಲಿನ ಪೆಟ್ರೋಲ್ ತೆಗೆದು ಮಹಿಳೆ ಮೈ ಮೇಲೆ ಎರಚಿ ಬೆಂಕಿ ಹಚ್ಚಿ ಕೊಲೆ‌ ಮಾಡಿ ವಿಕೃತಿ ಮೆರೆದಿದ್ದಾನೆ. ಅಲ್ಲದೆ ಈ ಹಿಂದಿನಿಂದಲೂ ವಿಕೃತ ಮನಸ್ಸಿನ ಗಂಗಪ್ಪ ಹತ್ಯೆಯಾದ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದು, ಜೀವ ಬೆದರಿಕೆಯನ್ನು ಕೂಡಾ ಹಾಕಿದ್ದನಂತೆ. ಈಗ ಹೇಳಿದ ಹಾಗೇ ಗಂಗಪ್ಪ ವಿಕೃತಿ ಮೇರೆದಿದ್ದಾನೆ ಎಂದು ಆರೋಪಿಸಿದರು.

ಇತ್ತೀಚೆಗೆ ರಾಜ್ಯದಲ್ಲಿ ದಲಿತ ಮಹಿಳೆಯರು ಸೇರಿದಂತೆ, ದಲಿತ ಕುಟುಂಬಗಳ ಮೇಲೆಯು ದೌರ್ಜನ್ಯಗಳು ಹೆಚ್ಚಾಗುಲ್ಲೇ ಬರುತ್ತಿವೆ. ಒಂದ ಹೊಂದೊಂದು ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಕೊಲೆ‌ ಪ್ರಕರಣಗಳು ನಡೆದುಕೊಂಡು ಬರುತ್ತಿವೆ. ಆದರೆ ಇದನ್ನು ತಡೆಯಬೇಕಾದ ರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿಫಲವಾಗುತ್ತಿದೆ. ಕೂಡಲೇ ಸರ್ಕಾರ ಯಾದಗಿರಿಯ ಸುರುಪುರ ತಾಲ್ಲೂಕಿನ ಚೌಡೇಶ್ವರಹಾಳ ಗ್ರಾಮದ ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಮಾಡಿರುವ ಗಂಗಪ್ಪನ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ‌ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ತಹಶಿಲ್ದಾರ ಮೂಲಕ ಮುಖ್ಯಮಂತ್ರಿಗಳಿ ಮನವಿ ಸಲ್ಲಿಸಿದರು.

Related Articles

Leave a Reply

Your email address will not be published.

Back to top button