Uncategorized

ಕಾವೇರಿ ನದಿ ಜಾಗೃತಿ ಯಾತ್ರೆಗೆ ಚಾಲನೆ

ಮಡಿಕೇರಿ : ಕೊಡಗಿನ ತಲಕಾವೇರಿಯಿಂದ ತಮಿಳುನಾಡಿನ ಪೂಂಪ್‌ಹಾರ್ ವರೆಗೆ ನಡೆಯುವ 11 ನೇ ವರ್ಷದ ಕಾವೇರಿ ನದಿ ಜಾಗೃತಿ ಯಾತ್ರೆಗೆ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಚಾಲನೆ ನೀಡಲಾಯಿತು.

ಶ್ರೀ ರಮಾನಂದ ಸ್ವಾಮೀಜಿ ನೇತೃತ್ವದ ಸಾಧು ಸಂತರ ತಂಡ ಕಾವೇರಿ ಮಾತೆಯ ರಥದೊಂದಿಗೆ ಯಾತ್ರೆಯನ್ನು ಆರಂಭಿಸಿದ್ದಾರೆ. ಅಖಿಲ ಭಾರತ ಸನ್ಯಾಸಿ ಸಂಘ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನದ ಆಶ್ರಯದಲ್ಲಿ ಕಾವೇರಿ ರಿವರ್ ಸೇವಾ ಟ್ರಸ್ಟ್ ಮತ್ತು ತಮಿಳುನಾಡಿನ ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್ ಸಹಯೋಗದೊಂದಿಗೆ ನಡೆಯುತ್ತಿರುವ ಯಾತ್ರೆಗೆ ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಅವರುಗಳು ಚಾಲನೆ ನೀಡಿದರು.

ಕಾವೇರಿ ರಿವರ್ ಸೇವಾ ಟ್ರಸ್ಟ್ ನ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ಪ್ರಧಾನ ಕಾರ್ಯದರ್ಶಿ ಮಂಡೇಪಂಡ ಬೋಸ್ ಮೊಣ್ಣಪ್ಪ, ಉಪಾಧ್ಯಕ್ಷರಾದ ಡಿ.ಆರ್.ಸೋಮಶೇಖರ್, ರೀನಾಪ್ರಕಾಶ್ ಮತ್ತಿತರರು ಹಾಜರಿದ್ದರು.

Related Articles

Leave a Reply

Your email address will not be published.

Back to top button