Uncategorized

ಕಾಂಗ್ರೆಸ್ ಮುಖಂಡ ಕೃಷ್ಣನಾಯಕ್ ಜೆಡಿಎಸ್ ಸೇರ್ಪಡೆ

ರಾಮನಗರ: ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡ ಕೃಷ್ಣನಾಯಕ್ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ರಾಮನಗರ ಜಿಲ್ಲೆ ಬಿಡದಿಯ ಕೇತುಗಾನಹಳ್ಳಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ‌ ತೆನೆ ಹೊತ್ತ ಮಹಿಳೆಗೆ ಕೃಷ್ಣನಾಯಕ್ ಸೇರಿಕೊಂಡಿದ್ದಾರೆ.

ತಮ್ಮ ಸಾವಿರಾರು ಕಾರ್ಯಕರ್ತರು ಹಾಗೂ ಪ್ರಮುಖ ಕಾಂಗ್ರೆಸ್ ಮುಖಂಡರ ಜೊತೆಗೆ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು.

ಕಳೆದ 2 ವರ್ಷಗಳಿಂದ ಕಾಂಗ್ರೆಸ್ ಪಕ್ಷದಿಂದ ದೂರು ಉಳಿದಿದ್ದ ಕೃಷ್ಣನಾಯಕ್ ಅವರಿಗೆ ಜೆಡಿಎಸ್ ಬಾವುಟವನ್ನ ಹೆಚ್.ಡಿ.ಕುಮಾರಸ್ವಾಮಿ ನೀಡಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಕೃಷ್ಣನಾಯಕ್ ಜೊತೆಗೆ ಜೆಡಿಎಸ್ ಸೇರ್ಪಡೆಗೊಂಡು ಪಕ್ಷ ಸಂಘಟನೆ ನಡೆಸುವಂತೆ ಹೆಚ್ಡಿಕೆ ಕಾರ್ಯಕರ್ತರಲ್ಲಿ ತಾಕೀತು ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button