Uncategorized

84 ಜನ ವಿವಿಧ ಸಂತ್ರಸ್ತರಿಗೆ ಹಕ್ಕುಪತ್ರ ವಿತರಣೆ

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆ ಹಿನ್ನೀರಿನಿಂದ ಬಾಧಿತಗೊಳಗಾದ ವಿವಿಧ 84 ಸಂತ್ರಸ್ತ ಕುಟುಂಬಗಳಿಗೆ ಶಾಸಕರಾದ ವೀರಣ್ಣ ಚರಂತಿಮಠ ಹಕ್ಕುಪತ್ರಗಳನ್ನು ವಿತರಿಸಿದರು.

ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಸಭಾಭವನದಲ್ಲಿಂದು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂತ್ರಸ್ತರಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದ ಅವರು ಮುಖ್ಯ ಸಂತ್ರಸ್ತರು 28, ಮುಖ್ಯ ಸಂತ್ರಸ್ತ ವಯಸ್ಕರ ಮಕ್ಕಳು 19, ಬಾಡಿಗೆದಾರರು 23, ಅತೀಕ್ರಮಣದಾರರು 3, ಅತಿಥಿ ಕುಟುಂಬ ಸಂತ್ರಸ್ತರು 2 ಹಾಗೂ ವಾಣಿಜ್ಯ 9 ಸೇರಿ ಒಟ್ಟು 84 ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1613 ಸಂತ್ರಸ್ತ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಹಕ್ಕುಪತ್ರ ಪಡೆದುಕೊಂಡ ಸಂತ್ರಸ್ತರು ಒಂದು ವರ್ಷದೊಳಗೆ ಮನೆಗಳನ್ನು ಕಟ್ಟಿಕೊಳ್ಳಲು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಬಿಟಿಡಿಎ ಸದಸ್ಯ ಎಂ.ಪಿ.ನಾಡಗೌಡ, ಎಸ್.ಎಂ.ಟವಳಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ, ಬಿಟಿಡಿಎ ಪುನರ್ವಸತಿ ಅಧಿಕಾರಿ ಗಣಪತಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button