Uncategorized
ಪತ್ನಿ ಸಾವನ್ನಪ್ಪಿದಕ್ಕೆ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಪತಿ
ಬೆಳಗಾವಿ: ಪತ್ನಿ ಸಾವಿನಿಂದ ಮನನೊಂದಿದ್ದ ವ್ಯಕ್ತಿಯೊಬ್ಬ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ.
ಬೋರಗಲ್ ಗ್ರಾಮದ ಗೋಪಾಲ ಹಾದಿಮನಿ (46) ಹಾಗೂ ಅವರ ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನಾ ಹಾದಿಮನಿ (8) ಆತ್ಮಹತ್ಯೆಗೆ ಶರಣಾದವರು.
ಜುಲೈ 6 ರಂದು ಗೋಪಾಲ್ ಅವರ ಪತ್ನಿ ಜಯಾ ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಗೋಪಾಲ್ ಅವರು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.