Uncategorized

ಸಿಂಧಗಿ ಉಪಚುನಾವಣೆ; ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಿಂಧಗಿ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ.

ನಾಜಿಯಾ ಶಕೀಲಾ ಅಂಗಡಿ ಅವರು MA, B.ed ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನೇಕ ವರ್ಷಗಳಿಂದ ಸಮಾಜಮುಖಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ.

ಪಕ್ಷನಿಷ್ಠೆಯ ಜತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಮಸ್ತ ಸಿಂಧಗಿ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ Be, M tech ಪದವೀಧರ ನಿಯಾಜ್ ಶೇಕ್ ಅವರನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದೆ.

Related Articles

Leave a Reply

Your email address will not be published. Required fields are marked *

Back to top button