Uncategorized

ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವಕ್ಕೆ ಸೂಚನೆ: ಕರಾಳ ದಿನಕ್ಕೆ ಅನುಮತಿ ಇಲ್ಲ: ಡಿಸಿ ಎಂ ಜಿ ಹಿರೇಮಠ

ಬೆಳಗಾವಿ: ಯಾವುದೇ ಕಾರಣಕ್ಕೂ ಕರಾಳ ದಿನ ಆಚರಣೆ ಮಾಡಲು ಅವಕಾಶ ಕೊಡುವುದಿಲ್ಲ. ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸೋಣ ಎಂದು ಕನ್ನಡ ಸಂಘಟನೆಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಕರೆ ನೀಡಿದರು.

ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಡಿಸಿ ಕಚೇರಿಯ ಸಭಾಂಗಣದಲ್ಲಿ ಕನ್ನಡ ಸಂಘಟನೆಗಳ ಜೊತೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಸಭೆ ಆರಂಭದಲ್ಲಿ ಇತ್ತಿಚೆಗೆ ಅಗಲಿದ ಕನ್ನಡ ಹೋರಾಟಗಾರರಾದ ರಾಮಚಂದ್ರ ಢವಳಿ, ಕಲ್ಯಾಣರಾವ್ ಮುಚಳಂಬಿ, ಪುಷ್ಪಾ ಹುಬ್ಬಳ್ಳಿ ಸೇರಿದಂತೆ ಇನ್ನಿತರರಿಗೆ ಸಂತಾಪ ಸೂಚಿಸಲಾಯಿತು. ನಂತರ ಮಾತನಾಡಿದ ಕನ್ನಡ ಸಂಘಟನೆಗಳ ಕ್ರಿಯಾಸಮಿತಿ ಜಿಲ್ಲಾಧ್ಯಕ್ಷ ಅಶೋಕ ಚಂದರಗಿ ಅವರು ಕಳೆದ ವರ್ಷಕ್ಕಿಂತ ಈ ವರ್ಷ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅವಕಾಶ ಮಾಡಿಕೊಡಬೇಕು. ಇಡೀ ನಗರವನ್ನು ಸುಂದರವಾಗಿ ಅಲಂಕಾರ ಮಾಡಬೇಕು. ರೂಪಕಗಳಿಗೆ ಅವಕಾಶ ಮಾಡಿಕೊಡಬೇಕು. ಕಡ್ಡಾಯವಾಗಿ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು.

ನಗರದ ಎಲ್ಲಾ ವೃತ್ತಗಳಲ್ಲಿ ಕನ್ನಡ ಬಾವುಟಗಳು, ಹಳದಿ-ಕೆಂಪು ಪರಪರಿಗಳನ್ನು ಹಾಕಿಸಬೇಕು. ಗಡಿ ಭಾಗದ ಎಲ್ಲಾ ಮರಾಠಿ ಶಾಲೆಗಳಲ್ಲಿಯೂ ಕರ್ನಾಟಕ ರಾಜ್ಯೋತ್ಸವ ಆಚರಿಸಬೇಕು. ಅದೇ ರೀತಿ ಯಾವುದೇ ಕಾರಣಕ್ಕೂ ಎಂಇಎಸ್‍ನವರಿಗೆ ಕರಾಳ ದಿನ ಆಚರಿಸಲು ಅನುಮತಿ ಕೊಡಬಾರದು. ಬರೀ ಒಂದು ದಿನ ಮಾತ್ರ ಕನ್ನಡದ ಕಾರ್ಯಕ್ರಮ ಆಗದೇ ವರ್ಷದ 365 ದಿನವೂ ಕಾರ್ಯಕ್ರಮಗಳು ಆಗಬೇಕು. ಮೆರವಣಿಗೆಗೆ ಅವಕಾಶ ಮಾಡಿಕೊಡಬೇಕು, ಮೆರವಣಿಗೆಗೆ ಬೇಕಾಗುವ ಎಲ್ಲ ಸೌಲಭ್ಯಗಳನ್ನು ಜಿಲ್ಲಾಡಳಿತ ಮಾಡಿಕೊಡಬೇಕು. ಇನ್ನು ಮೆರವಣಿಗೆಯಲ್ಲಿ ಪೊಲೀಸರು ಯಾವುದೇ ರೀತಿ ಅಡೆತಡೆ ಮಾಡಬಾರದು. ಅಲ್ಲದೇ ಕೋವಿಡ್ ವ್ಯಾಕ್ಸಿನೇಶನ್‍ಗೆ ಹೆಚ್ಚು ಮಹತ್ವ ಕೊಡುವ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಕನ್ನಡಪರ ಹೋರಾಟಗಾರರು, ಪತ್ರಕರ್ತರನ್ನು ಸನ್ಮಾನಿಸಲು ಸಲಹೆ:

ಕನ್ನಡಪರ ಹೋರಾಟಗಾರ ಮೆಹಬೂಬ್ ಮಕಾನದಾರ ಮಾತನಾಡಿ, ಕನ್ನಡಪರ ಹೋರಾಟಗಾರರು ಹಾಗೂ ಪತ್ರಕರ್ತರಿಗೆ ಪ್ರತಿವರ್ಷದಂತೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಗಳ ಮೂಲಕ ಅರ್ಹರನ್ನು ಗುರುತಿಸಿ ಪ್ರಶಸ್ತಿ ನೀಡುವ ಕ್ರಮವಾಗಬೇಕು ಎಂದು ಸಲಹೆ ನೀಡಿದರು. ರಾಜ್ಯೋತ್ಸವ ಮೆರವಣಿಗೆ ವೀಕ್ಷಿಸಲು ಆಗಮಿಸುವ ಮಹಿಳೆಯರಿಗೆ ಚೆನ್ನಮ್ಮ ವೃತ್ತದಲ್ಲಿ ಪ್ರತ್ಯೇಕವಾಗಿ ಗ್ಯಾಲರಿ ನಿರ್ಮಿಸಬೇಕು ಎಂದು ಮಕಾನದಾರ ಹೇಳಿದರು.

ರೂಪಕ ವಾಹನಗಳು ಹಾಗೂ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಅರವಿಂದ ದೇಶಪಾಂಡೆ ಒತ್ತಾಯಿಸಿದರು

Related Articles

Leave a Reply

Your email address will not be published.

Back to top button