Uncategorized
ರೈತನ ಮೇಲೆ ಲಾಠಿ ಬೀಸಿದ ಅಥಣಿ ಪೊಲೀಸರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಬೆಳಗಾವಿ: ಕಬ್ಬು ತುಂಬಿದ ರೈತರ ಟ್ರ್ಯಾಕ್ಟರ್ ಚಾಲಕನ ಮೇಲೆ ಅಥಣಿ ಪೊಲೀಸರು ಮನಬಂದಂತೆ ಹಲ್ಲೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇತ್ತ ಅಥಣಿ ಪೊಲೀಸರು ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಕಳೆದ ಎರಡು ವರ್ಷಗಳಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಅತಿಯಾದ ಮಳೆಯಿಂದ ಸಂಭವಿಸಿದ ಅತಿವೃಷ್ಟಿ, ಪ್ರವಾಹದಂತಹ ಸಂಕಷ್ಟಗಳನ್ನು ಎದುರಿಸಿದ್ದಾರೆ. ಇದರ ಜೊತೆಗೆ ಕೊರೊನಾ ಸಂಕಷ್ಟಕ್ಕೆ ನಲುಗಿದ ಈ ಭಾಗದ ರೈತರು ಲಕ್ಷಾಂತರ ಸಾಲ ಮಾಡಿಕೊಂಡಿದ್ದಾರೆ.
ಆದ್ರೆ, ಕಟಾವಿಗೆ ಬಂದ ಕಬ್ಬನ್ನು ಕಾರ್ಖಾನೆಗೆ ಕಳುಹಿಸಿ ತಾವು ಹಾಕಿದ ಶ್ರಮಕ್ಕೆ ರೈತರು ಹರಸಾಹಸಪಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ಜಮೀನುಗಳಿಗೆ ಕಬ್ಬು ತುಂಬಿಕೊಂಡು ಹೋಗುವ ಟ್ರ್ಯಾಕ್ಟರ್ ಚಾಲಕರಿಗೆ ಅಥಣಿ, ಚಿಕ್ಕೋಡಿ ಉಪವಿಭಾಗದ ಪೊಲೀಸರು ನಿತ್ಯ ಕಿರುಕುಳ ಕೊಡುತ್ತಿದ್ದು, ಮನಬಂದಂತೆ ಚಾಲಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.