Uncategorized

ಗೋಮಾಂಸ ಮಾರಾಟ : ಅಂಗಡಿಗಳ ಮೇಲೆ ಪೊಲೀಸರ ದಾಳಿ

ಕೊಡಗು : ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯ ಅರಕಲಗೂಡು ಪಟ್ಟಣದಲ್ಲಿ ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಬೆಳ್ಳಂ ಬೆಳಗ್ಗೆ ಪೋಲೀಸರ ದಾಳಿ ಮಾಡಿ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ.

ಅರಕಲಗೂಡು ಠಾಣೆ ಪಿಎಸ್ ಐ ಮಾಲಾ ಮತ್ತು ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಂತೇಮರೂರು ರಸ್ತೆಯ ಬನ್ನಿ ಮಂಟಪದ‌ ಎದುರು ರಾಜಾರೋಷವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಬಕಾಷ್ ಎಂಬುವನನ್ನು ಬಂಧಿಸಿದ್ದಾರೆ.

ಈ ವೇಳೆ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿದ್ದ ಗೋ ಮಾಂಸವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅರಕಲಗೂಡು ಪಟ್ಟಣದಲ್ಲಿ ಅಕ್ರಮ ಗೋ‌ಮಾಂಸ ಮಾರಾಟಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ.

ಗೋ‌ಮಾಂಸ ಮರಾಟಕ್ಕೆ ಬ್ರೇಕ್ ಹಾಕಿರುವುದಕ್ಕೆ ಜಾಮೀಯಾ ಮಸೀದಿ ಅಧ್ಯಕ್ಷರಾದ ಸಲೀಂ ಹರ್ಷ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button