Uncategorized

ನೆಲಮಂಗಲ: ರಸ್ತೆ ಬದಿ ಅಂಗಡಿಗಳ ತೆರವು: ವ್ಯಾಪಾರಿಗಳಿಗೆ ಶಾಕ್ ನೀಡಿದ ನಗರಸಭೆ

ದೇವನಹಳ್ಳಿ: ಇಂದು ಬೆಳ್ಳಂಬೆಳಿಗ್ಗೆ ನೆಲಮಂಗಲ ನಗರಸಭೆ ಅಧಿಕಾರಿಗಳು ರಸ್ತೆಬದಿ ವ್ಯಾಪಾರ ಮಾಡುವ ಅಂಗಡಿಗಳ ತೆರವು ಕಾರ್ಯಕ್ಕೆ ಮುಂದಾಗಿದ್ದು, ಬೀದಿಬದಿ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ. ಇದರಿಂದ ದಿಕ್ಕು ತೋಚದ ಬೀದಿಬದಿ ವ್ಯಾಪಾರಿಗಳು ರಸ್ತೆಯಲ್ಲಿ ಕುಳಿತು ನಗರಸಭೆ ವಿರುದ್ಧ ಪ್ರತಿಭಟನೆಗೆ ಮುಂದಾದ ಘಟನೆ ನೆಲಮಂಗಲದ ಸೊಂಡೆಕೊಪ್ಪ ರಸ್ತೆಯಲ್ಲಿ ನೆಡೆದಿದೆ.

ನೆಲಮಂಗಲ ನಗರದ ಸೊಂಡೇಕೊಪ್ಪ ಮುಖ್ಯರಸ್ತೆಯಲ್ಲಿ ಬೀದಿಬದಿ ವ್ಯಾಪಾರಿಗಳು ರಸ್ತೆಯ ಎರಡೂ ಬದಿಗಳಲ್ಲಿ ವ್ಯಾಪಾರ ಮಾಡುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ ಜನದಟ್ಟಣೆ ಹೆಚ್ಚಾಗಿದ್ದು, ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಎಂಬ ಕಾರಣ ನೀಡಿ ಶೀಘ್ರವಾಗಿ ಅಂಗಡಿಗಳನ್ನು ತೆರವುಗೊಳಿಸುವಂತೆ ನಗರ ಸಭೆಯಿಂದ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿತ್ತು ಆದರೆ ವ್ಯಾಪಾರಿಗಳು ಅಂಗಡಿಗಳನ್ನು ತೆರವು ಮಾಡದಿದ್ದರಿಂದ ಇಂದು ಬೆಳಿಗ್ಗೆಯೇ ನಗರಸಭೆ ಆಯುಕ್ತ ಮಂಜುನಾಥ್ ಮತ್ತು ಸಿಬ್ಬಂದಿಗಳು ರಸ್ತೆಯ ಎರಡೂ ಬದಿಯ ಅಂಗಡಿಗಳನ್ನು ತೆರವುಗೊಳಿಸಿದರು.

ಹೀಗಾಗಿ ಬೀದಿಬದಿ ವ್ಯಾಪಾರಿಗಳೊಂದಿಗೆ ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಾ.ಬಿ. ನರಸಿಂಹಯ್ಯ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನೆಡೆಸಿದರು, ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ವೃತ್ತ ನಿರೀಕ್ಷಕ ಎ.ವಿ.ಕುಮಾರ್, ರಸ್ತೆಯಲ್ಲಿ ಪ್ರತಿಭಟನೆ ಮಾಡಬೇಡಿ ಅನುಮತಿ ಪಡೆದು ನಗರಸಭೆ ಬಳಿ ಮಾಡಿಕೊಳ್ಳಿ ವಾಹನ ಸಂಚಾರಕ್ಕೆ ಅಡ್ಡಿಮಾಡಬೇಡಿ ಎಂದು ಪ್ರತಿಭಟನಾ ನಿರತರಿಗೆ ಮನವಿ ಮಾಡಿದರು.

ವ್ಯಾಪಾರಿಗಳ ಪರವಾಗಿ ನಿಂತ ಅಸಂಘಟಿತ ಕಾರ್ಮಿಕರ ಸಂಘ ಬೀದಿಬದಿ ವ್ಯಾಪಾರಿಗಳಿಗೆ ಈಗಾಗಲೇ ಐಡಿ ಕಾರ್ಡ್ ವಿತರಿಸಿ, ಸಾಲ ನೀಡಿದ್ದು, ಅವರಿಗೆ ವ್ಯಾಪಾರ ಮಾಡಲು ಸಮಸ್ಯೆಯಾಗದಂತೆ ಸೂಕ್ತ ಸ್ಥಳ ಕಲ್ಪಿಸಿ ಎಂದು ನಗರಸಭೆ ಆಯುಕ್ತ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.

Related Articles

Leave a Reply

Your email address will not be published.

Back to top button