Uncategorized

ದತ್ತಮಾಲಾ ಅಭಿಯಾನ; ಸರಳವಾಗಿ ಆಚರಿಸಲು ಜಿಲ್ಲಾಡಳಿತ ಸೂಚನೆ

ಚಿಕ್ಕಮಗಳೂರು: ಶ್ರೀರಾಮಸೇನೆಯಿಂದ ನ.14ರಂದು ಆಯೋಜಿಸಿರುವ ದತ್ತಮಾಲಾ ಅಭಿಯಾನವನ್ನು ಸರಳವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಅವರು ಶ್ರೀರಾಮಸೇನೆ ಕಾರ್ಯಕರ್ತರಿಗೆ ತಿಳಿಸಿದರು.

ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಆವರಣದಲ್ಲಿ ಕನಿಷ್ಠ 400 ಜನ ಸೇರಲು ಅವಕಾಶವಿದೆ. ಮೆರವಣಿಗೆ, ಶೋಭಾಯಾತ್ರೆಗೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಾತನಾಡಿ, ವಾಹನಗಳಲ್ಲಿ ಬೆಟ್ಟಕ್ಕೆ ತರಳುವ ಬಗ್ಗೆ ಅನುಮತಿ ಪಾಸ್ ಪಡೆಯಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕಲು ಅವಕಾಶವಿಲ್ಲ. ನಗರಸಭೆ ಆಯುಕ್ತರು ಸೂಚಿಸಿದ ಐದು ಕಡೆ ಮಾತ್ರ ಬ್ಯಾನರ್ ಕಟ್ಟಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಪ್ರವಾಸಿಗರಿಗೆ ನ.14ರಂದು ಪ್ರವೇಶ ನಿರ್ಬಂಧ:

ದತ್ತಮಾಲಾ ಅಭಿಯಾನ ನಡೆಯುವುದರಿಂದ ನ.14ರಂದು ಬಾಬಾ ಬುಡನ್ಗಿರಿಗೆ ಪ್ರವಾಸಿಗರು ಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ., ಪ್ರವಾಸಿಗರು ಬಾಬಾಬುಡನ್ ಗಿರಿಗೆ ಆಗಮಿಸದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published.

Back to top button